ಸಿನಿಮಾ

ಇಲ್ಲಿದೆ ನೋಡಿ ಯಶ್ ರಾಧಿಕಾ ಪಂಡಿತ್ ರವರ ಮುದ್ದು ಮಗಳ ಫೋಟೋ…

By admin

December 04, 2018

ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ.

ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ ಮೇಲಂತೂ ಅವಳೊಂದಿಗೆ ನನ್ನ ಪ್ರೀತಿ ನೂರ್ಮಡಿಯಾಗಿದೆ” ಎಂದು ಫೇಸ್ ಬುಕ್‍ನಲ್ಲಿ ಬರೆದುಕೊಂಡಿದ್ದಾರೆ.

ತನ್ನ ಮುದ್ದಾದ ಮಗಳೊಂದಿಗೆ ಯಶ್ ಕಾಣಿಸಿಕೊಂಡಿರುವ ಫೋಟೋಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.ನಟಿ ರಾಧಿಕ ಪಂಡಿತ್ ಅವರು ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಯಶ್ ಆಸ್ಪತ್ರೆಯ ಬೆಡ್ ಮೇಲೆ ಮಲಗಿದ್ದ ಮಗಳನ್ನು ಒಂದೇ ನೋಟದೊಂದಿಗೆ ಸೂಕ್ಷ್ಮವಾಗಿ ಗಮನಿಸುತ್ತಿರುವ ಫೋಟೋ ಕಂಡ ಅಭಿಮಾನಿಗಳು ಸಂತಸಗೊಂಡು ಶುಭ ಕೋರಿದ್ದಾರೆ.

ಯಶ್ ತಾವು ಮೊದಲೇ ಅಂದುಕೊಂಡಂತೆ ಹೆಣ್ಣು ಮಗಳು ಹುಟ್ಟಿದ್ದು, ಮಗು ಹುಟ್ಟಿದಾ ಕ್ಷಣ ಹೆಣ್ಣು ಮಗು ಎಂದು ಗೊತ್ತಾದ ಕೂಡಲೇ ಆನಂದ ಭಾಷ್ಪ ಸುರಿಸಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.