ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಸುಮಲತಾ ಅಂಬರೀಶ್ ಪರವಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಪ್ರಚಾರ ನಡೆಸಲಿದ್ದಾರೆ.
ಇದಕ್ಕೆ ಮಂಡ್ಯ ಜೆಡಿಎಸ್ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದ್ದು, ಸಿನಿಮಾ ರಂಗದವರು ಬಂದರೆ ಮಂಡ್ಯದ ಜನ ಮರುಳಾಗುವುದಿಲ್ಲ ಎಂದು ಹೇಳಿದ್ದಾರೆ.
‘ಗಜಕೇಸರಿ’, ‘ಐರಾವತ’ ಬಂದರೂ, ಗೆಲ್ಲುವುದು ‘ಅಭಿಮನ್ಯು’ ನಿಖಿಲ್ ಎಂದು ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಚಾರ ಮಾಡಿ ಸಿದ್ದರಾಮಯ್ಯ, ಆನಂದ ಅಪ್ಪುಗೋಳ, ಕೆ. ಶಿವರಾಮ್, ಸುರೇಶ್ ಗೌಡ ಅವರನ್ನು ಸೋಲಿಸಿದ್ದು ಯಾರು ಎಂದು ದರ್ಶನ್ ಅವರಿಗೆ ಜೆಡಿಎಸ್ ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಕಾವೇರಿ ವಿವಾದದ ಸಂದರ್ಭದಲ್ಲಿ ಬಾರದ ನಟರು ಈಗ ಬಂದಿದ್ದಾರೆ ಎಂದು ದೂರಿದ್ದಾರೆ.
ಸುಮಲತಾ ಪರವಾಗಿ ನಿಂತಿರುವ ನಟರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗಿದೆ. ಯಾವ ನಟರು ಬಂದರೂ ಮಂಡ್ಯದ ಜನ ಮರಳಾಗುವುದಿಲ್ಲ. ಸಿನಿಮಾ ಇಂಡಸ್ಟ್ರಿಯ ಎಲ್ಲರೂ ಬಂದರೂ, ಮಂಡ್ಯದಲ್ಲಿ ಗೆಲ್ಲೋದೇ ನಿಖಿಲ್ ಎಂದು ಹೇಳಲಾಗಿದೆ.