ಲೂಸ್ ಮಾದ ಎಂದೇ ಖ್ಯಾತಿಯಾಗಿರುವ ನಟ ಯೋಗಿ ಪತ್ನಿ ಸಾಹಿತ್ಯ ಅವರು ಇಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಬೆಳಗ್ಗೆ 5 ಗಂಟೆ ಸುಮಾರಿಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮದರ್ ವುಡ್ ಆಸ್ಪತ್ರೆಯಲ್ಲಿ ಸಾಹಿತ್ಯ ಅವರಿಗೆ ಹೆಣ್ಣು ಮಗು ಜನಿಸಿದೆ. ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.
ನಟ ಯೋಗೀಶ್ ಕುಟುಂಬದವರು ತಮ್ಮ ಮನೆಗೆ ಯುವರಾಣಿ ಬಂದಿದ್ದಾಳೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ನೂ ತಂದೆಯಾದ ಯೋಗಿ ತಮ್ಮ ಮುದ್ದು ಮಗಳನ್ನು ತಮ್ಮ ಕೈಯಲ್ಲಿ ಹಿಡಿದುಕೊಂಡು ಖುಷಿ ಪಟ್ಟಿದ್ದಾರೆ.
ನಟ ಯೋಗಿ ತಮ್ಮ ಬಾಲ್ಯದ ಗೆಳತಿ ಸಾಹಿತ್ಯ ಅವರನ್ನು ಕುಟುಂಬದ ಸಮ್ಮುಖದಲ್ಲಿ 2017 ನವೆಂಬರ್ 2ರಂದು ಮದುವೆಯಾಗಿದ್ದರು. ಸಾಹಿತ್ಯ ಅವರು ಐಟಿ ಉದ್ಯೋಗಿಯಾಗಿದ್ದು, ಯೋಗಿ ಅವರು ಬಾಲ್ಯದ ಗೆಳತಿಯಾಗಿದ್ದಾರೆ. ಇವರಿಬ್ಬರು ಪರಸ್ಪರ ಪ್ರೀತಿ ಮಾಡುತ್ತಿರುವ ವಿಚಾರವನ್ನು ಪೋಷಕರಿಗೆ ತಿಳಿಸಿ, ಕುಟುಂಬಸ್ಥರ ಒಪ್ಪಿಗೆ ಪಡೆದುಕೊಂಡು ಎಲ್ಲರ ಸಮ್ಮುಖದಲ್ಲಿ ಮದುವೆ ಆಗಿದ್ದರು.