ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಸ್ಯಾಹಾರಿ ಖಾದ್ಯವನ್ನು ಆರ್ಡರ್ ಮಾಡಿದ್ದ ವಕೀಲರೊಬ್ಬರಿಗೆ ಮಾಂಸಾಹಾರಿ ಖಾದ್ಯವನ್ನು ಡೆಲಿವರಿ ಮಾಡಿದ್ದಕ್ಕಾಗಿ ಆಹಾರ ಸರಬರಾಜು ಮಾಡುವ ಝೊಮ್ಯಾಟೋ ಹಾಗೂ ಆ ಮಾಂಸಾಹಾರಿ ಖಾದ್ಯವನ್ನು ನೀಡಿದ ಹೋಟೆಲ್ ಗೆ ಪುಣೆಯ ಗ್ರಾಹಕ ನ್ಯಾಯಾಲಯವು 55 ಸಾವಿರ ರುಪಾಯಿ ದಂಡ ವಿಧಿಸಿದೆ. ಮಾಧ್ಯಮದ ವರದಿ ಪ್ರಕಾರ, ಇನ್ನು ನಲವತ್ತೈದು ದಿನದೊಳಗೆ ವಕೀಲ ಷಣ್ಮುಖ್ ದೇಶ್ ಮುಖ್ ಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಸೂಚನೆ ನೀಡಿದೆ.

ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ ಅವರಿದ್ದ ಪೀಠ, ಪುಣೆಯ ಕೇಂದ್ರ ಕಚೇರಿ, ಗುರ್ಗಾಂವ್ ಕೇಂದ್ರ ಕಚೇರಿ ಹಾಗೂ ಪುಣೆಯ ಹೋಟೆಲ್ ಪ್ರೀತ್ ಪಂಜಾಬಿ ಸ್ವಾದ್ ಹೋಟೆಲ್‍ಗೆ 55 ಸಾವಿರ ರೂ. ದಂಡ ವಿಧಿಸಿದ್ದು, 45 ದಿನಗಳಲ್ಲಿ ದಂಡವನ್ನು ಗ್ರಾಹಕರಿಗೆ ಪಾವತಿಸವಂತೆ ಸೂಚಿಸಿದೆ. ತಡವಾದರೆ ಅದಕ್ಕೆ ಅನ್ವಯವಾಗುವ ಬಡ್ಡಿಯನ್ನು ಸೇರಿಸಿ ಹಣ ನಿಡುವಂತೆ ಸೂಚಿಸಿದೆ.

ಪನ್ನೀರ್ ಬಟರ್ ಮಸಾಲವನ್ನು ಆರ್ಡರ್ ಮಾಡಿದ್ದ ವಕೀಲರಿಗೆ ಅದರ ಬದಲಿಗೆ ಬಟರ್ ಚಿಕನ್ ಡೆಲಿವರಿ ಮಾಡಲಾಗಿದೆ. ಎರಡಕ್ಕೂ ಬಳಸುವ ಸಂಬಾರು ಪದಾರ್ಥಗಳು ಬಹುತೇಕ ಒಂದೇ ಥರ ಇರುವುದರಿಂದ ವಕೀಲರಿಗೆ ವ್ಯತ್ಯಾಸ ಗೊತ್ತಾಗದೆ ಚಿಕನ್ ಅನ್ನೇ ತಿಂದಿದ್ದರು.ಅಂದ ಹಾಗೆ ಅವರಿಗೆ ಹೀಗೆ ಸಸ್ಯಾಹಾರದ ಬದಲಿಗೆ ಮಾಂಸಾಹಾರ ಖಾದ್ಯವನ್ನು ಡೆಲಿವರಿ ಮಾಡಿದ್ದು ಎರಡು ಬಾರಿಯಂತೆ.

ಈ ಕುರಿತು ಝೊಮ್ಯಾಟೊ ಸ್ಪಷ್ಟಪಡಿಸಿದ್ದು, ವಕೀಲರು ಆಪ್‍ನಲ್ಲಿಯೇ ದೂರು ನೀಡಿದ್ದರು. ಈಗಾಗಲೇ ಅವರ ಹಣವನ್ನು ಮರುಪಾವತಿ ಮಾಡಲಾಗಿದೆ ಎಂದು ತಿಳಿಸಿದೆ. ಅಲ್ಲದೆ ಬೇರೆ ಪದಾರ್ಥ ಡೆಲಿವರಿ ಮಾಡಿರುವುದು ಹೋಟೆಲ್ ತಪ್ಪು ಎಂದು ಝೊಮ್ಯಾಟೊ ವಾದಿಸಿದೆ. ಹೋಟೆಲ್‍ನಷ್ಟೇ ತಪ್ಪು ಸಂಸ್ಥೆಯದ್ದೂ ಇದೆ ಎಂದು ಗ್ರಾಹಕರ ನ್ಯಾಯಾಲಯ ತಿಳಿಸಿದೆ. ಹೋಟೆಲ್ ಸಹ ತನ್ನ ತಪ್ಪನ್ನು ಒಪ್ಪಿಕೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ರಜನಿಕಾಂತ್, ‘ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿಲ್ಲ.
ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು. ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ…
ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.
ರೈತ ನಾಯಕ ,ಶಾಸಕ ಕೆ ಎಸ್ ಪುಟ್ಟಣ್ಣಯ್ಯ (69) ಹೃದಯಾಘಾಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ.ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯವನ್ನು ವೀಕ್ಷಿಸುತ್ತಿರುವ ಸಂದರ್ಭದಲ್ಲಿ ಹಠಾತ್ ಕುಸಿದುಬಿದ್ದ ಪುಟ್ಟಣ್ಣಯ್ಯ ಅವರನ್ನು ತಕ್ಷಣ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಒಂದೇ ಸ್ಟ್ರೆಚರ್ನಲ್ಲಿ ಪುರುಷ ರೋಗಿ ಜೊತೆ ಎಕ್ಸ್ ರೇ ರೂಮಿಗೆ ಹೋಗುವಂತೆ ಮಹಿಳೆಗೆ ಒತ್ತಾಯಿಸಿದ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ಇರುವ ಮಹಾರಾಜ ಯಶವಂತರಾವ್ ಆಸ್ಪತ್ರೆಯಲ್ಲಿ ನಡೆದಿದೆ.ಸಂಗೀತಾ ಪುರುಷ ರೋಗಿ ಜೊತೆ ಸ್ಟ್ರೆಚರ್ ಹಂಚಿಕೊಂಡ ಮಹಿಳೆ. ಸಂಗೀತಾ ಕಳೆದ 12 ದಿನಗಳ ಹಿಂದೆ ಬಲಗಾಲು ಫ್ರ್ಯಾಕ್ಚರ್ ಆಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಎಕ್ಸ್ ರೇ ರೂಮಿಗೆ ಕರೆದುಕೊಂಡು ಹೋಗಬೇಕಾದರೆ ಸ್ಟ್ರೆಚರ್ ಇಲ್ಲವೆಂದು ಪುರುಷ ರೋಗಿಯಿದ್ದ ಸ್ಟ್ರೆಚರ್ನಲ್ಲಿ ಹೋಗುವಂತೆ ಸಿಬ್ಬಂದಿ ಒತ್ತಾಯ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ….